ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.
* ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಕೊಳ್ಳಬಹುದು.
ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು.
* ಪಡಿತರ ಚೀಟಿಯ ಇ-ಕೆವೈಸಿ ಕಡ್ಡಾಯ.
* ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಇ- ಕೆವೈಸಿ ಮಾಡಬೇಕು.
* ಪಡಿತರ ಚೀಟಿ ಅಪ್ಡೇಟ್ ಅಪ್ ಡೇಟ್ ಮಾಡಬೇಕು.
ಈ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.