ಶಿಗ್ಗಾವಿ ಕ್ಷೇತ್ರದಲ್ಲಿ ಬೊಮ್ಮಾಯಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರೆ ಗೆಲುವು: ಭರತ್ ಪರ ಅರವಿಂದ ಬೆಲ್ಲದ ಬ್ಯಾಟಿಂಗ್

ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಪಕ್ಷದ ಟಿಕೆಟ್ ಕೊಟ್ಟರೆ ಗೆಲುವು ಸಾಧ್ಯ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು…

ಹುಬ್ಬಳ್ಳಿ: ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬಕ್ಕೆ ಪಕ್ಷದ ಟಿಕೆಟ್ ಕೊಟ್ಟರೆ ಗೆಲುವು ಸಾಧ್ಯ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಅವರು ಬೊಮ್ಮಾಯಿ ಪುತ್ರ ಭರತ್ ಪರ ಬ್ಯಾಟ್ ಬಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದ ಮೂರು ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದ್ದು, ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿತು. ಆಗ, ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ ಎಂದು ತಿಳಿಸಿದ್ದೇನೆ ಎಂದರು.

ನನಗಿರೋ ಮಾಹಿತಿ ಪ್ರಕಾರ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆದಿದ್ದಾರೆ. ಮಾಜಿ ಸಚಿವ ಮುರಗೇಶ ನಿರಾಣಿ ಅವರು ಟಿಕೆಟ್ ವಿಚಾರವಾಗಿ ನಿನ್ನೆ ಮಾತಾಡಿದ್ದಾರೆ. ಈ ಹಿಂದೆ ಅವರು ಟಿಕೆಟ್ ಪ್ರಯತ್ನ ಮಾಡಿದ್ದು ನಿಜ. ಬೇರೆ ಅಭ್ಯರ್ಥಿಗಳಿದ್ದಾರೆ. ಆದ್ರೆ ಜನರ ಅಪೇಕ್ಷೆ ಬೊಮ್ಮಾಯಿ ಕುಟುಂಬಕ್ಕೆ ಟಿಕೆಟ್ ಕೊಡಬೇಕು ಅನ್ನೋದ ಇದೆ. ಕೊನೆಗೆ ಹೈಕಮಾಂಡ್ ತೀರ್ಮಾನ ಎಲ್ಲರೂ ಒಪ್ಪಬೇಕು ಎಂದರು.

Vijayaprabha Mobile App free

ಸಿ.ಪಿ.ಯೋಗೇಶ್ವರ ಪರ ಒಲವು:

ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರೇ ಅಭ್ಯರ್ಥಿ ಆಗಬೇಕು. ನಾವೆಲ್ಲರೂ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡ್ತೀವಿ. ಕಳೆದ ಲೋಕಸಭೆ ಚುನಾವಣೆಯಲ್ಲಿ ಯೋಗೇಶ್ವರ ಒಳ್ಳೆ ಕೆಲಸ ಮಾಡಿದ್ದಾರೆ. ಜನರ ಮನಸ್ಸಿನಲ್ಲಿ ಯೋಗೇಶ್ವರ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ ಅವರಿಗೆ ಟಿಕೆಟ್ ಕೊಡಬೇಕು. ಬೇರೆ ಯಾರೆ ಆದರೂ ಚುನಾವಣೆ ಟಫ್ ಆಗತ್ತೆ. ಹಾಗಾಗಿ ಅಂತಿಮವಾಗಿ ಕುಮಾರಸ್ವಾಮಿ ಅವರೇ ತಿರ್ಮಾನ ಮಾಡ್ತಾರೆ ಎಂದು ಸಿಪಿವೈ ಪರ ಬೆಲ್ಲದ ಒಲವು ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.