ನವದೆಹಲಿ: ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು (ಸೆ.21) ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್ ಅಹ್ಲಾವತ್ ಅವರು ದಿಲ್ಲಿ
ಕ್ಯಾಬಿನೆಟ್ಗೆ ಹೊಸದಾಗಿ ಪ್ರವೇಶಿಸುತ್ತಿದ್ದಾರೆ. ಸುಲ್ತಾನ್ಪುರ ಮಜ್ರಾದಿಂದ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಿರ್ಗಮಿತ ಕೇಜ್ರಿವಾಲ್ ಸರ್ಕಾರದಲ್ಲಿ ಅತಿಶಿ ಅವರು ಹಣಕಾಸು, ಕಂದಾ ಯ, ಲೋಕೋಪಯೋಗಿ, ವಿದ್ಯುತ್ ಮತ್ತು ಶಿಕ್ಷಣ ಸೇರಿದಂತೆ 13 ಪ್ರಮುಖ ಖಾತೆಗಳನ್ನು ಹೊಂದಿದ್ದರು.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅರವಿಂದ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಹೊರಬಂದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು . ಅದಾದ ಬಳಿಕ ಶಾಸಕಾಂಗ ಸಭೆಯಲ್ಲಿ ಅವಿರೋಧವಾಗಿ ಆತಿಶಿ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿತ್ತು.