ಅಯೋಧ್ಯೆಯ ರಾಮಪಥ, ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪ ಕಳವು

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36…

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್ ದೀಪಗಳನ್ನು ಕಳವು ಮಾಡಲಾಗಿದೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮ ಪಥ ಮೇಲೆ ಈ ದೀಪಗಳನ್ನು ಅಳವಡಿಸಲಾಗಿತ್ತು.

ಈ ಬಗ್ಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಯು ಆಗಸ್ಟ್ 9 ರಂದು ದೂರು ದಾಖಲಿಸಿದ್ದಾರೆ. ಆ ಬಳಿಕ ಕಳ್ಳತನ ವಿಷಯ ಬೆಳಕಿಗೆ ಬಂದಿದೆ.

Vijayaprabha Mobile App free

ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಲಾಗಿದೆ. ಮಾರ್ಚ್ 19 ರವರೆಗೆ ಎಲ್ಲಾ ದೀಪಗಳು ಇದ್ದವು ಆದರೆ ಮೇ 9 ರಂದು ಪರಿಶೀಲನೆಯ ನಂತರ ಕೆಲವು ದೀಪಗಳು ಕಾಣೆಯಾಗಿರುವುದು ಕಂಡುಬAದಿದೆ. ಇದುವರೆಗೆ ಸುಮಾರು 3,800 ದೀಪಗಳು ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.