ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ED ದಾಳಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ…

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ.

ಇಂದು ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ಇಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಬಳ್ಳಾರಿಯಲ್ಲಿರುವ ಶಾಸಕ ನಾಗೇಂದ್ರ ನಿವಾಸ ಹಾಗೂ ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.

Vijayaprabha Mobile App free

ಬೆಂಗಳೂರಿನ ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸುತ್ತಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.