ಮೊದಲ ಮಗುವಿನ ನಿರೀಕ್ಷೆಯಲ್ಲಿ ಅಭಿಷೇಕ್ ಅಂಬರೀಷ್, ಅವಿವಾ ದಂಪತಿ

ಬೆಂಗಳೂರು: ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆಗಸ್ಟ್ 15ರಂದು ಸೀಮಂತ ಶಾಸ್ತ್ರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅವಿವಾಗೆ ಏಳು ತಿಂಗಳಾಗಿದೆ. ಈ ಹಿನ್ನೆಲೆ ಸುಮಲತಾ ಅವರು ಸೀಮಂತ…

ಬೆಂಗಳೂರು: ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಆಗಸ್ಟ್ 15ರಂದು ಸೀಮಂತ ಶಾಸ್ತ್ರ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಅವಿವಾಗೆ ಏಳು ತಿಂಗಳಾಗಿದೆ. ಈ ಹಿನ್ನೆಲೆ ಸುಮಲತಾ ಅವರು ಸೀಮಂತ ಶಾಸ್ತ್ರ ಹಮ್ಮಿಕೊಂಡಿದ್ದಾರೆ. ಆಗಸ್ಟ್ 15ರಂದು ಅಭಿಷೇಕ್ ಅಂಬರೀಷ್ ಮನೆಯಲ್ಲಿ ಸರಳವಾಗಿ ಈ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಶಾಸ್ತ್ರವು ತುಂಬಾನೇ ಖಾಸಗಿಯಾಗಿ ನಡೆಯಲಿದೆ ಎನ್ನಲಾಗಿದೆ.

ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಆಪ್ತರು ಹಾಗೂ ಕುಟುಂಬದವರು ಕೂಡ ಈ ಶಾಸ್ತ್ರದಲ್ಲಿ ಭಾಗಿ ಆಗಲಿದ್ದಾರೆ. ಇದಕ್ಕಾಗಿ ಈಗಾಗಲೇ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

Vijayaprabha Mobile App free

2023ರ ಜೂನ್ 5ರಂದು ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೇ ಜೂನ್‌ನಲ್ಲಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಅವರು ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.