ಬೆಂಗಳೂರು: ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಸೆ.19ಕ್ಕೆ ಕಾಯ್ದಿರಿಸಿದೆ.
ಈ ಕುರಿತ ಅರ್ಜಿ ಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಬುಧವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಸಿ.ಎಸ್.ಪ್ರದೀ ಪ್ ಕುಮಾರ್ ಆರೋ ಪಿಯ ಜಾಮೀನು ಅರ್ಜಿಗೆ ಸುದೀರ್ಘ ಆಕ್ಷೇಪಣೆ ಸಲ್ಲಿಸಿದರು.ಮುನಿರತ್ನ ಪರ ಹೈಕೋ ರ್ಟ್ ಹಿರಿಯ ವಕೀ ಲ ಅಶೋ ಕ ಹಾರನಹಳ್ಳಿ ವಾದ ಮಂಡಿಸಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment