ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.
ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment