ಬೆಂಗಳೂರು: ಲೇಡೀಸ್ ಪಿಜಿಗೆ ನುಗ್ಗಿ ಯುವತಿಯ ಕೊಲೆ!

ಬೆಂಗಳೂರು: ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ರಕ್ತದ ಕೋಡಿಯೇ ಹರಿದಿದ್ದು ನಗರವೇ ಬೆಚ್ಚಿ ಬಿದ್ದಿದೆ. ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿ ಈ ಬರ್ಬರ…

ಬೆಂಗಳೂರು: ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ರಕ್ತದ ಕೋಡಿಯೇ ಹರಿದಿದ್ದು ನಗರವೇ ಬೆಚ್ಚಿ ಬಿದ್ದಿದೆ. ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೋರಮಂಗಲದಲ್ಲಿರುವ ಲೇಡಿಸ್‌ ಪಿಜಿಯಲ್ಲಿ ಈ ಬರ್ಬರ ಘಟನೆ ನಡೆದಿದ್ದು, ಮೃತ ಯುವತಿಯನ್ನು ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ (Crime News).

ರಾತ್ರಿ 11.10ರಿಂದ 11.30ರ ಸುಮಾರಿಗೆ ಈ ಹತ್ಯೆ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯಲ್ಲಿ ವಾಸವಾಗಿದ್ದರು.

ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ತೀವ್ರ ಗಾಯಗೊಂಡ ಕೃತಿ ಕುಮಾರಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬಳಿಕ ಯುವಕ ಪರಾರಿಯಾಗಿದ್ದಾನೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.