ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯಲ್ಲಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ(Bengaluru ZP Recruitment) ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಇಲ್ಲಿ ನೀಡಿರುವ ಎಲ್ಲಾ ಅರ್ಹತೆಗಳನ್ನು ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ.
ಆಫ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸುವಂತಹ ಆಸಕ್ತ ಅಭ್ಯರ್ಥಿಗಳು ಇಲ್ಲಿ ನೀಡಿರುವಂತಹ ಸಂಪೂರ್ಣ ಅರ್ಹತೆಗಳನ್ನು ತೆಗೆದುಕೊಂಡು ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ನೇಮಕಾತಿ ಇಲಾಖೆ – ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ
• ಹುದ್ದೆಗಳ ಸಂಖ್ಯೆ – 05 ಹುದ್ದೆಗಳು
• ಉದ್ಯೋಗ ಸ್ಥಳ – ಬೆಂಗಳೂರು
ಹುದ್ದೆಗಳ ವಿವರ – ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ
• District MIS Co-ordinator – 01 ಹುದ್ದೆ
• Technical Assistant – 02 ಹುದ್ದೆ
• Technical Assistant (Forest) – 01 ಹುದ್ದೆ
• Technical Assistant (Silk) – 01 ಹುದ್ದೆ
ಒಟ್ಟು ಹುದ್ದೆಗಳ ಸಂಖ್ಯೆ – 05 ಹುದ್ದೆಗಳು
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅರ್ಹತೆಗಳು :
• ಜಿಲ್ಲಾ ಎಂ ಐ ಎಸ್ ಕೋ ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಅಥವಾ MCA ಮುಗಿಸಿರಬೇಕು.• ವಿವಿಧ ವಿಭಾಗಗಳ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತ ಪಡೆದಿರುವ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಬಿ ಎಸ್ಸಿ ಪದವಿ ಮುಗಿಸಿರಬೇಕು.
ವಯೋಮಿತಿ ಅರ್ಹತೆಗಳು – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷದ ಅವಧಿಯ ಒಳಗಿರಬೇಕು.
ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ – ಹುದ್ದೆಗಳಿಗೆ ಅನುಗುಣವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 26,000/- ದಿಂದ 34,000/- ವರೆಗೆ ನೀಡಲಾಗುತ್ತದೆ.
ಅರ್ಜಿ ಶುಲ್ಕ / Application Fee: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಿರುವಂತಹ ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಅರ್ಜಿ ಕಳುಹಿಸಬೇಕು.
ವಿಳಾಸ: ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ಬನಶಂಕರಿ, ಬೆಂಗಳೂರು 560070
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 02, 2024