ಪೌರ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ ಸರ್ಕಾರ! ಏನದು? ಇಲ್ಲಿದೆ ನೋಡಿ

(Pourakarmika) ಕರ್ನಾಟಕ ಸರ್ಕಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನದ ಪೂರ್ಣ ರಜೆ ನೀಡುವಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪೌರಕಾರ್ಮಿಕರಿಗೆ ಪ್ರಸ್ತುತ ವಾರಕ್ಕೆ ಎರಡು…

(Pourakarmika) ಕರ್ನಾಟಕ ಸರ್ಕಾರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಒಂದು ದಿನದ ಪೂರ್ಣ ರಜೆ ನೀಡುವಂತೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಪೌರಕಾರ್ಮಿಕರಿಗೆ ಪ್ರಸ್ತುತ ವಾರಕ್ಕೆ ಎರಡು ಬಾರಿ ಅರ್ಧ ದಿನ ರಜೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಬದಲಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ಘೋಷಿಸಲು ಸರ್ಕಾರ ಅನುಮೋದನೆ ನೀಡಿದೆ.

ನಿತ್ಯ ಸ್ವಚ್ಛತಾ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಶೇಕಡ 85ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ಒಂದು ದಿನ ವಾರದ ರಜೆ ನೀಡಬೇಕು. ಇದೇ ವೇಳೆ ಬೇರೊಬ್ಬರನ್ನು ಸಂಬಂಧಿಸಿದ ಕಾರ್ಯಕ್ಕೆ ನಿಯೋಜಿಸಬೇಕು. ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರು ಹಕ್ಕು ಎಂದು ಪರಿಗಣಿಸುವಂತಿಲ್ಲ. ವಾರದ ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯುವಂತಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Vijayaprabha Mobile App free

ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ, ಸಮಾರಂಭಗಳ ವಿಶೇಷ ಸಂದರ್ಭದಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ. ರಜೆ ಮೇಲೆ ತೆರಳಿದ ನೌಕರ, ಪೌರ ಕಾರ್ಮಿಕರ ವ್ಯಾಪ್ತಿಗೆ ಸೇರಿದ ಪ್ರದೇಶದ ಸ್ವಚ್ಛತಾ ಕಾರ್ಯವನ್ನು ಸಾರ್ವಜನಿಕರಿಗೆ ತೊಂದರೆ ಆಗದಂತೆ ಕೆಲಸಕ್ಕೆ ಹಾಜರಾದ ಇತರೆ ಸಿಬ್ಬಂದಿಯಿಂದ ಸ್ವಚ್ಛಗೊಳಿಸಬೇಕು ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.