ವಾಲ್ಮೀಕಿ ನಿಗಮ ಹಗರಣದಲ್ಲಿ ಮತ್ತೊಬ್ಬನ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ (Valmiki Corporation Scam) ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ (SIT) ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ…

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ (Valmiki Corporation Scam) ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ (SIT) ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಜೊತೆ ಸತತ ಸಂಪರ್ಕದಲ್ಲಿದ್ದ ಈ ಆರೋಪಿ ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲು ಸಹಕಾರ ನೀಡಿದ್ದ. ಇದೇ ರೀತಿ ಈ ಹಿಂದೆಯೂ ಈ ಆರೋಪಿಗಳು ಕೃತ್ಯ ಎಸಗಿದ್ದರು. ಛತ್ತೀಸ್‌ಗಢದಲ್ಲಿ ಸತ್ಯನಾರಾಯಣ ವರ್ಮಾ ಹಾಗೂ ಶ್ರೀನಿವಾಸ ರಾವ್ ಸೇರಿ ಇಂಥದೇ ಕೃತ್ಯ ಎಸಗಿದ್ದಾರೆ. ಅದೇ ರೀತಿ ನಿಗಮದ ಅಕೌಂಟ್‌ನಿಂದ ಹಣ ಅಕ್ರಮ ವರ್ಗಾವಣೆ ಮಾಡಿದ್ದರು.

ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಶ್ರೀನಿವಾಸ ರಾವ್ ಎಸ್ಕೇಪ್ ಆಗಿದ್ದ. ಇದೀಗ ಎಸ್‌ಐಟಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ. ಸದ್ಯ ಆರೋಪಿಯನ್ನು ಒಂಬತ್ತು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Vijayaprabha Mobile App free

ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿ ಈಗಾಗಲೇ ಮಹತ್ವದ ಬೆಳವಣಿಗೆಗಳು ನಡೆದಿವೆ. ಮೂವರನ್ನು ಬಂಧಿಸಲಾಗಿದೆ. ಇವರಲ್ಲಿ ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕ ಪರಿಶೋಧಕ ಪರಶುರಾಮ್‌ ಸೇರಿದ್ದಾರೆ. ಪ್ರಕರಣದಲ್ಲಿ ಇಡಿ ಸಹ ತನಿಖೆಗೆ ಇಳಿದಿದೆ. ಒಂದು ವಾರದ ಹಿಂದೆ ಮಾಜಿ ಸಚಿವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಬಿ. ನಾಗೇಂದ್ರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿದ್ದು, ಅವರನ್ನು ಬಂಧಿಸಿ ತನಿಖೆ ನಡೆಸುತ್ತಿದೆ. ಹಗರಣದಲ್ಲಿ ಪಾಲ್ಗೊಂಡಿರುವ ಯೂನಿಯನ್‌ ಬ್ಯಾಂಕ್‌ ಸಿಬ್ಬಂದಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನೂ ಆರು ಮಂದಿ ನಾಪತ್ತೆಯಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.