ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ; ಮಿಲಿಟರಿ ಆಡಳಿತ ಆರಂಭ

ಢಾಕಾ: ಬಾಂಗ್ಲಾದೇಶದಲ್ಲಿ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿರುವ ಬೆನ್ನಲ್ಲೇ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ ಶೇಖ್ ಹಸೀನಾ ಅವರ ರಾಜೀನಾಮೆ ಬೆನ್ನಲ್ಲೇ ಮಿಲಿಟರಿ ಆಡಳಿತ ಪ್ರಾರಂಭವಾಗಿದೆ.

ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು ಮನೆಗೆ ನುಗ್ಗಿ ಪ್ರತಿಭಟನೆ ಮಾಡುವ ಮುನ್ನವೇ ಶೇಖ್ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಇನ್ನು ಕೆಲ ಮಾಧ್ಯಮಗಳ ಪ್ರಕಾರ ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆಗೆ ಒತ್ತಾಯಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡು ಹಿಂಸಾಚಾರಕ್ಕೆ ತಿರುಗಿತ್ತು. ಇಂದು ಸುಮಾರು 10 ಲಕ್ಷ ವಿದ್ಯಾರ್ಥಿಗಳು ಢಾಕಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿಂಸಾಚಾರದಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಮಂದಿ ಮೃತಪಟ್ಟಿರುತ್ತಾರೆ.

Advertisement

ಪ್ರತಿಭಟನಕಾರರು ಮತ್ತು ಆಡಳಿತಾರೂಢ ಅವಾಮಿ ಲೀಗ್‌ನ ಬೆಂಬಲಿಗರ ನಡುವೆ ಈ ಘರ್ಷಣೆ ನಡೆದಿದೆ. ಇನ್ನು 100 ಮಂದಿ ಸಾವನ್ನಪ್ಪುವ ಜೊತೆಗೆ ನಾರಾರು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಇಸ್ಕಾನ್ ಮತ್ತು ಕಾಳಿ ದೇವಾಲಯಗಳು ಸೇರಿದಂತೆ ಹಿಂದೂ ದೇವಾಲಯ ಹಾಗೂ ಮನೆಗಳನ್ನು ಗುರಿಯಾಗಿಸಿಕೊಂಡಿದ್ದು, ಇದರಿಂದಾಗಿ ಭಕ್ತರು ಪರದಾಡಬೇಕಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು