ಲೆಬನಾನ್‍ಗೆ ಪ್ರಯಾಣಿಸದಂತೆ ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

ಬರ್ಲಿನ್:ಇಸ್ರೇಲ್‌ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ…

ಬರ್ಲಿನ್:ಇಸ್ರೇಲ್‌ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ ನೀಡಿದೆ.

ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ತೀವ್ರ ಎಚ್ಚರಿಕೆಯಿಂದ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.

ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಗೆ ಕರೆ ಮಾಡುವಂತೆ ತಿಳಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.