ವಿಜಯಪುರ:ಬಿಜೆಪಿ ಶಾಸಕ ಮುನಿರತ್ನ ಬಂಧನಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಅದು ಏನಿದೆ ನನಗೆ ಗೊತ್ತಿಲ್ಲ, ನಕಲಿ ಆಡಿಯೋಗಳನ್ನ ಸೃಷ್ಟಿಸುತ್ತಾರೆ. ಹಾಸ್ಯ ಕಲಾವಿದ ಒಬ್ಬ ಇದ್ದಾನೆ, ಎಷ್ಟು ಚೆಂದ ಮಿಮಿಕ್ರಿ ಮಾಡುತ್ತಾನೆ ಎಂದು ಹೇಳಿಕೆ ನೀಡಿದ್ಧಾರೆ.
ಮುನಿರತ್ನ ವೈರಲ್ ಆಡಿಯೋ ಕುರಿತಾಗಿ ಪರೋಕ್ಷವಾಗಿ ಆಡಿಯೋ ಡೂಪ್ಲಿಕೇಟ್ ಎಂಬ ನಿಟ್ಟಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಆಡಿಯೋ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿರತ್ನ ಪರವಾಗಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment