ಮದ್ಯ ಸೇವಿಸುವ ಮುನ್ನ ಎಚ್ಚರ: ಬಿಹಾರದ ಕಳ್ಳಬಟ್ಟಿ ದುರಂತಕ್ಕೆ 25 ಮಂದಿ ಬಲಿ, 12 ಜನ ಬಂಧನ

ಪಾಟ್ನಾ: ಬಿಹಾರ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಿದ್ದರು ಸಹ ಸಿವಾನ್‌ ಹಾಗೂ ಸರಣ್‌ ಜಿಲ್ಲೆಯಲ್ಲಿ ನಕಲಿ ಮದ್ಯ ದೊರೆತಿದ್ದು, ಸಾರಾಯಿ ಸೇವನೆ ಪ್ರಕರಣ ಸಂಬಂಧ ಮತ್ತೆ 19 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ 2 ದಿನಗಳಲ್ಲಿ…

ಪಾಟ್ನಾ: ಬಿಹಾರ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಿದ್ದರು ಸಹ ಸಿವಾನ್‌ ಹಾಗೂ ಸರಣ್‌ ಜಿಲ್ಲೆಯಲ್ಲಿ ನಕಲಿ ಮದ್ಯ ದೊರೆತಿದ್ದು, ಸಾರಾಯಿ ಸೇವನೆ ಪ್ರಕರಣ ಸಂಬಂಧ ಮತ್ತೆ 19 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ 2 ದಿನಗಳಲ್ಲಿ ಸಾವಿನ ಸಂಖ್ಯೆ 25ಕ್ಕೆ ಏರಿದೆ.

ಈ ಪೈಕಿ ಸಿವಾನ್‌ನಲ್ಲಿ 20 ಹಾಗೂ ಸರಣ್‌ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ನಕಲಿ ಮದ್ಯ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ನಿತೀಶ್‌ ಕುಮಾರ್‌, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಕರಣಕ್ಕೆ ರಾಜಕೀಯ ಲೇಪ:

ಇದೇ ವೇಳೆ ದುರ್ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ‘ನಕಲಿ ಮದ್ಯ ಸೇವನೆಗೆ 25 ಮಂದಿ ಸಾವನ್ನಪ್ಪಿರುವುದು ದುರದೃಷ್ಟಕರ. ರಾಜ್ಯದಲ್ಲಿ ಮದ್ಯ ಮಾರಾಟ ಹಾಗೂ ಸೇವನೆಗೆ ನಿಷೇಧವಿದ್ದರೂ ಅಕ್ರಮ ಮದ್ಯ ಮಾರಾಟ ವ್ಯಾಪಕವಾಗಿದೆ’ ಎಂದು ಕಿಡಿಕಾರಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ‘ಅವಕಾಶವಾದಿ ಡಬಲ್‌ ಎಂಜಿನ್‌ ಸರ್ಕಾರ ಬಿಹಾರದಲ್ಲಿ ಅಮಾಯಕರ ಸಾವಿಗೆ ಕಾರಣವಾಗಿದೆ’ ಎಂದು ಅಡಳಿತ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.