ಬೆಳಗಾವಿ: ರಾಜ್ಯೋತ್ಸವದ ದಿನ ಕರಾಳ ದಿನಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಎಂಇಎಸ್ ಮುಖಂಡರಿಗೆ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಬುದ್ಧಿವಾದ ಹೇಳಿದ್ದಾರೆ.
ದಿನ ಕರಾಳ ದಿನಾಚರಣೆಗೆ ಅನುಮತಿಗಾಗಿ ಜಿಲ್ಲಾಧಿಕಾರಿ ಅವರನ್ನು ಭೇಟಿಯಾದ ಎಂಇಎಸ್ ಮುಖಂಡರಿಗೆ ಮುಖಭಂಗವಾಗಿದೆ. ನವೆಂಬರ್ 1ರಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲ ಎಂದು ಕಡ್ಡಿಮುರಿದಂತೆ ಹೇಳುವ ಮೂಲಕ ಡಿಸಿ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ಹಾಗಂತ ನವೆಂಬರ್ 1 ಬಿಟ್ಟು ಪರ್ಯಾಯ ದಿನ ಅವಕಾಶ ಕೊಡ್ತಿನಿ. ಆದ್ರೆ ಕರ್ನಾಟಕದ ಐಕ್ಯತೆಗೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.