ಬಿಹಾರದ ದೇವಾಲಯದಲ್ಲಿ ಕಾಲ್ತುಳಿತಕ್ಕೆ ಸಿಕ್ಕಿ 7 ಮಂದಿ ಸಾವು, ಹಲವರಿಗೆ ಗಾಯ

ಬಿಹಾರ: ಬಿಹಾರದ ಜೆಹಾನಾಬಾದ್ ನಲ್ಲಿ ದೇವಸ್ಥಾನವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮಖ್ದುಂಪುರದ ಬಾಬಾ ಸಿದ್ಧ ನಾಥ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ. ಗಾಯಗೊಂಡವರನ್ನು…

ಬಿಹಾರ: ಬಿಹಾರದ ಜೆಹಾನಾಬಾದ್ ನಲ್ಲಿ ದೇವಸ್ಥಾನವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಮಂದಿ ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮಖ್ದುಂಪುರದ ಬಾಬಾ ಸಿದ್ಧ ನಾಥ ದೇವಸ್ಥಾನದಲ್ಲಿ ಈ ಘಟನೆ ವರದಿಯಾಗಿದೆ.

ಗಾಯಗೊಂಡವರನ್ನು ಜೆಹಾನಾಬಾದ್‌ ಮತ್ತು ಮಖ್ದುಂಪುರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಅಲಂಕೃತಾ ಪಾಂಡೆ ಹೇಳಿದ್ದಾರೆ.

ಜೆಹಾನಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲಂಕೃತಾ ಪಾಂಡೆ,ಜೆಹಾನಾಬಾದ್ ಜಿಲ್ಲೆಯ ಮಖ್ದುಂಪುರ್‌ ನಲ್ಲಿರುವ ಬಾಬಾ ಸಿದ್ಧನಾಥ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ನಾವು ಎಲ್ಲವನ್ನೂ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಮತ್ತು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.

Vijayaprabha Mobile App free

ಕಾಲ್ತುಳಿತದ ಸುದ್ದಿ ಹೊರಬಿದ್ದ ಕೂಡಲೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ಸದ್ಯ ಕಾಲ್ತುಳಿತದಲ್ಲಿ ಮೃತಪಟ್ಟವರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೇವಾಲಯದಲ್ಲಿ ಕಾಲ್ತುಳಿತಕ್ಕೆ ನಿಖರವಾಗಿ ಕಾರಣವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ವಿಕಾಸ್ ಕುಮಾರ್, ಎಸ್ಡಿಒ ಜೆಹಾನಾಬಾದ್ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.