ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ…

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಹ್ಯಾಕರ್‌ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪೊಲೀಸರು ದಾಖಲಿಸಿದ್ದಂತ ಸಂಘಟಿತ ಅಪರಾಧಗಳ ಕಾಯ್ದೆಯಡಿಯ ಪ್ರಕರಣವನ್ನು ರದ್ದುಗೊಳಿಸಿದೆ.

ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದರು.

ಇನ್ನು ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ವಾದ ಮಂಡಿಸಿದ್ದು, ‘ಜಾಮೀನು ಸಿಗದಂತೆ ಮಾಡಲು ಕೆಸಿಒಸಿ ಕಾಯ್ದೆ ಅನ್ವಯಿಸಲಾಗಿದೆ ಎಂದರು. ಈ ಹಿನ್ನಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯಿಸಿದ್ದನ್ನು ರದ್ದುಪಡಿಸಿದ ಹೈಕೋರ್ಟ್ ವ್ಯಾಪ್ತಿಯಿರುವ ನ್ಯಾಯಾಲಯ ಶೀಘ್ರ ಜಾಮೀನು ಅರ್ಜಿ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

Vijayaprabha Mobile App free

ಇನ್ನು ಕಳೆದ ಜೂ.27 ರಂದು ಬಿಟ್ ಕಾಯಿನ್ ​ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿ ಶ್ರೀಧರ್ ಪೂಜಾರಿಗೆ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ನೀಡಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.