ಬಿಜೆಪಿಯಿಂದ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ..!

ಬೆಂಗಳೂರು : ರಾಜ್ಯಪಾಲ ನಡೆ ವಿರೋಧಿಸಿ ಕಾಂಗ್ರೆಸ್ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಕರೆ ಕೊಟ್ಟರೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಪಕ್ಷ ನಾಯಕ ಆರ್…

ಬೆಂಗಳೂರು : ರಾಜ್ಯಪಾಲ ನಡೆ ವಿರೋಧಿಸಿ ಕಾಂಗ್ರೆಸ್ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಕರೆ ಕೊಟ್ಟರೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ವಿಪಕ್ಷ ನಾಯಕ ಆರ್ ಅಶೋಕ್,ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30 ಕ್ಕೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರವು ಕಳೆದ 15 ತಿಂಗಳಿನಿಂದ ಆಡಳಿತ ನಡೆಸುತ್ತಿದ್ದು, ಕಾಂಗ್ರೆಸ್ ನಡಿಗೆ ಭ್ರಷ್ಟಾಚಾರದ ಕಡೆಗೆ ಘೋಷಣೆಯನ್ನು ರಾಜ್ಯದ ಜನರು ಮಾತನಾಡಲು ಆರಂಭಿಸಿದ್ದಾರೆ ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಕ್ಲೀನ್ ಎನ್ನುತ್ತಿದ್ದಾರೆ. ಅದೇನು ಕ್ಲೀನೋ ನನಗೂ ಗೊತ್ತಿಲ್ಲ,ಕಳೆದ ಬಾರಿ ಸಿದ್ದರಾಮಯ್ಯ ಆಗಿದ್ದಾಗ ಸಿಎಂ ಆಗಿದ್ದಾಗ 65 ಕೇಸುಗಳಿದ್ದವು. ಹ್ಯೂಬ್ಲೆಟ್ ವಾಚಿನಿಂದ ಹಿಡಿದು ಡಿನೋಟಿಫಿಕೇಶನ್ ರೀಡುವರೆಗೆ ಕೇಸುಗಳಿದ್ದವು. ಅವೆಲ್ಲವನ್ನೂ ಅವರು ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಟೀಕಿಸಿದರು. ಸಿದ್ದರಾಮಯ್ಯ ಯಾವ ನೈತಿಕತೆ ಇಟ್ಟುಕೊಂಡು ಹೀಗೆ ಮಾತನಾಡುತ್ತಾರೋ ಗೊತ್ತಿಲ್ಲ ಎಂದರು. ಗೌರವಾನ್ವಿತ ರಾಜ್ಯಪಾಲರು, 3 ಖಾಸಗಿ ದೂರುಗಳನ್ನು ಪರಿಶೀಲಿಸಿ, ಕಾನೂನು ತಜ್ಞರ ಜೊತೆ ಚರ್ಚಿಸಿ ಈಗ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರೋದ್ರಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಇದಕ್ಕಾಗಿ ನಾಳೆ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಂಡಿರೋದಾಗಿ ಆರ್ ಅಶೋಕ್‌ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.