ವಿಜಯಪುರ: ಇತ್ತೀಚೆಗೆ ಇಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಬೆಂಬಲಿತ ನಗರಸಭಾ ಸದಸ್ಯ ಪರಶುರಾಮ ಹೊಸಮನಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 15 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಅವರು ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೊಸಮನಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ಅವರ ದೂರಿನ ಆಧಾರದ ಮೇಲೆ, ಯತ್ನಾಳ್ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಂತಿ ಕದಡುವ ಉದ್ದೇಶಪೂರ್ವಕ ಅವಮಾನ ಮತ್ತು ಸುಳ್ಳು ಹಾಗೂ ತಪ್ಪು ಮಾಹಿತಿ ಹರಡಿದ ಪ್ರಕರಣವನ್ನು ದಾಖಲಿಸಲಾಗಿದೆ.