ಮುಂಬೈ: ಮುಂಬೈನ 60ಕ್ಕೂ ಹೆಚ್ಚು ಸಂಸ್ಥೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ- ಮೇಲ್ ಕಳುಹಿಸಿದ್ದ ಆರೋಪದಡಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಮವಾರ ( ಜೂನ್ 17) ಮತ್ತು ಮಂಗಳವಾರ ಈ ಬೆದರಿಕೆಯ ಇ- ಮೇಲ್‌ಗಳನ್ನು ಸ್ವೀಕರಿಸಲಾಗಿದೆ. ಬೃಹತ್ ಮುಂಬೈ ನಗರ ಪಾಲಿಕೆ ಸೇರಿದಂತೆ ಶಾಲೆ, ಕಾಲೇಜು, ಇನ್ನಿತರ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಯೊಡ್ಡಲಾಗಿತ್ತು ಎಂದು ತಿಳಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಬೆದರಿಕೆ ಬಂದ ಎಲ್ಲಾ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಆದರೆ ಅನುಮಾನಾಸ್ಪದವಾಗಿ ಯಾವುದೇ ವಸ್ತುಗಳು ಕಂಡು ಬಂದಿಲ್ಲ. ಅಪರಿಚಿತರು ಕಿಡಿಗೇಡಿತನ ಎಸೆಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.