BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್: ಇನ್ನೂ ಮುಂದೆ ಅಕ್ಕಿ ಜೊತೆ ಉಚಿತವಾಗಿ ಸಿಗಲಿದೆ ದಿನಸಿ ಸಾಮಗ್ರಿ!

(BPL-CARD:) ಚುನಾವಣೆಗೂ ಮುಂಚೆ ಕಾಂಗ್ರೆಸ್ ಸರ್ಕಾರವು ಘೋಷಿಸಿದ 10ಕೆ.ಜಿ ಅಕ್ಕಿ ನೀಡುವ ಭರವಸೆಯನ್ನು ಉಳಿಸಿಕೊಳ್ಳಲು ಇಲ್ಲಿಯ ತನಕ ಪಡಿತರ ಕಾರ್ಡು ಹೊಂದಿರುವವರಿಗೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲಾಗಿ…

(BPL-CARD:) ಚುನಾವಣೆಗೂ ಮುಂಚೆ ಕಾಂಗ್ರೆಸ್ ಸರ್ಕಾರವು ಘೋಷಿಸಿದ 10ಕೆ.ಜಿ ಅಕ್ಕಿ ನೀಡುವ ಭರವಸೆಯನ್ನು ಉಳಿಸಿಕೊಳ್ಳಲು ಇಲ್ಲಿಯ ತನಕ ಪಡಿತರ ಕಾರ್ಡು ಹೊಂದಿರುವವರಿಗೆ 5 ಕೆಜಿ ಅಕ್ಕಿ ಹಾಗೂ ಉಳಿದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯನಿಗೆ 170 ರೂ. ನಂತೆ ಹಣವನ್ನು ನೀಡಲಾಗುತ್ತಿತ್ತು. ಆದರೆ ಇದೀಗ 5 ಕೆ.ಜಿ ಅಕ್ಕಿ ಹಣವನ್ನು ನೀಡುತ್ತಿರುವುದರ ಬದಲಾಗಿ ಎಣ್ಣೆ, ಬೇಳೆ ಇತರೆ ಅಡುಗೆ ದಿನಸಿ ಸಾಮಗ್ರಿಗಳನ್ನು ನೀಡಲು ಸರ್ಕಾರವು ಚಿಂತನೆ ನಡೆಸಿದೆ.

ಕರ್ನಾಟಕ ಸರ್ಕಾರವು ಇತ್ತೀಚೆಗೆ ನಡೆಸಿದಂತಹ ಸಮೀಕ್ಷೆಯಲ್ಲಿ ಶೇಕಡ 93 ರಷ್ಟು ಪಡಿತರದಾರರು, 5 ಕೆ.ಜಿ ಅಕ್ಕಿಯ ಜೊತೆಗೆ ಇನ್ನೂ ಐದು ಕೆಜಿ ಅಕ್ಕಿಯ ಬದಲಾಗಿ ದಿನಸಿ ಸಾಮಗ್ರಿಗಳನ್ನು ಪಡೆಯಲು ಆಸಕ್ತಿ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ದಿನಸಿ ಸಾಮಗ್ರಿಗಳನ್ನು ಕೊಡುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಅದೇ ರೀತಿ ಇದರ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದೆಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದಂತಹ ಕೆ.ಎಚ್ ಮುನಿಯಪ್ಪನವರು ತಿಳಿಸಿದ್ದಾರೆ.

ಕರ್ನಾಟಕ ಸರಕಾರವು ಪ್ರತಿಯೊಂದು ಗ್ಯಾರಂಟಿ ಯೋಜನೆಗಳನ್ನು ಸರಿಯಾದ ಕ್ರಮದಲ್ಲಿ ಜಾರಿಗೆ ತರಲು ಪ್ರಯತ್ನ ಪಡುತ್ತಿದ್ದು, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ದಾರಿಯಲ್ಲಿ ನಡೆದುಕೊಳ್ಳುತ್ತಿದೆ.

Vijayaprabha Mobile App free

ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಕೆ:
ಹೌದು, ಕೆಲ ದಿನಗಳ ಹಿಂದೆಯೇ ಕೇಂದ್ರ ಗ್ರಾಹಕ ವ್ಯವಹಾರಗಳು ಆಹಾರ ಮತ್ತು ಪಡಿತರ ವಿತರಣಾ ಸಚಿವರಾದಂತಹ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. ಹಾಗೂ 5 ಕೆ.ಜಿಯ ಅಕ್ಕಿಯ ಬದಲಾಗಿ ಗ್ರಾಹಕರಿಗೆ ಇತರೆ ಅಡುಗೆ ದಿನಸಿ ಸಾಮಗ್ರಿಗಳನ್ನು ನೀಡುವುದರ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿ. ಕೆ ಶಿವಕುಮಾರ್ ಅವರೊಂದಿಗೆ ಚರ್ಚೆಯನ್ನು ನಡೆಸಿ ಈ ಯೋಜನೆಯನ್ನು ಯಾವ ರೀತಿ ಜಾರಿಗೆ ತರಬಹುದು ಎಂಬುದನ್ನು ಚರ್ಚೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರವು ಅಕ್ಕಿ ಕೊಡುವುದಾಗಿ ಮನವಿ ಸಲ್ಲಿಸಿದ್ದು, ಈ ಒಂದು ಮನವಿಗೆ ಕೇಂದ್ರ ಸರ್ಕಾರವು ಒಪ್ಪಿಗೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಪಡಿತರ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಾಗಿ ದಿನಸಿ ಸಾಮಗ್ರಿಗಳನ್ನು ನೀಡುವುದನ್ನು ಯಾವ ರೀತಿ ಕಾರ್ಯಗತ ಮಾಡಲಿದೆ ಎಂದು ಕಾಯ್ದು ನೋಡಬೇಕಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.