(bpl-card) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲು ಫುಡ್ ಕಿಟ್ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಜಾರಿಗೆ ಬರಲಿದೆ. ಹೌದು, ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು, ಅಕ್ಕಿಯ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ವಿತರಿಸಲಾಗುವುದು.
(bpl-card) ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ 170 ರೂ. ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಇತರ ಸಾಮಗ್ರಿ ಒಳಗೊಂಡ ಪುಡ್ ಕಿಟ್ ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಆಹಾರ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment