(bpl-card-cancel:) ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ. ಅಲ್ಲದೆ ಉಚಿತ ಚಿಕಿತ್ಸೆ, ಹಲವು ಯೋಜನೆಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಹಲವು ಜನ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಅಂತಹ ನಕಲಿ ದಾಖಲೆಯನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿರುವವರಿಗೆ ಇದೀಗ ಸಂಕಷ್ಟ ಎದುರಾಗಿದೆ.
ಹೌದು, ಬಿಪಿಎಲ್ ರೇಷನ್ ಕಾರ್ಡ್ ಗಾಗಿ ನಕಲಿ ದಾಖಲೆಯನ್ನು ನೀಡಿ ಕಾರ್ಡ್ ಪಡೆದುಕೊಂಡಿರುವವರಿಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎನ್ನಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರನ್ನು ಗುರುತಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚುರುಕು ನೀಡಿದೆ. ತೆರಿಗೆ ಪಾವತಿದಾರರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರಾಗಿರುವ ಕುಟುಂಬದವರು, ಮನೆಗಳನ್ನು ಬಾಡಿಗೆ ನೀಡಿದವರು, 7.5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿದವರು, ಸ್ವಂತಕ್ಕೆ ನಾಲ್ಕು ಚಕ್ರದ ವಾಹನ ಹೊಂದಿದವರು ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳುವಂತಿಲ್ಲ. ಆದರೂ ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದಾರೆ.
ಸುಳ್ಳು ದಾಖಲೆ ನೀಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ:
ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಸಾಬೀತಾದಲ್ಲಿ ಇದುವರೆಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಪಡಿತರ ಮತ್ತು ಇತರೆ ಧಾನ್ಯಗಳ ಮೊತ್ತವನ್ನು ಅಕ್ಕಿ ಕೇಜಿಗೆ ತಲಾ 35 ರೂ.ನಂತೆ ಮರಳಿಸಬೇಕು. ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕಾಗುತ್ತದೆ.
ಸುಳ್ಳು ದಾಖಲೆ ನೀಡಿ ಪಡೆದುಕೊಂಡ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಗಳನ್ನು ಹಿಂತಿರುಗಿಸುವಂತೆ ಆಹಾರ ಇಲಾಖೆ ಅನೇಕ ಬಾರಿ ಅವಕಾಶ ನೀಡಿದೆ. ಇದೀಗ ಪರಿಶೀಲನಾ ಕಾರ್ಯಕ್ಕೆ ಮತ್ತಷ್ಟು ಚುರುಕು ನೀಡಲಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಆಯಾ ತಾಲೂಕು ಕಚೇರಿಗೆ ತೆರಳಿ ಸ್ವಯಂ ಪ್ರೇರಿತವಾಗಿ ವಾಪಸ್ ನೀಡಬೇಕು. ಆಹಾರ ಇಲಾಖೆಯೇ ಪತ್ತೆ ಮಾಡಿದಲ್ಲಿ ಇದುವರೆಗೂ ನ್ಯಾಯಬೆಲೆ ಅಂಗಡಿಯಲ್ಲಿ ಪಡೆದ ಅಕ್ಕಿ ಅಥವಾ ಇತರೆ ಧಾನ್ಯಗಳ ಮೊತ್ತವನ್ನು ವಸೂಲಿ ಮಾಡಲಾಗುವುದು ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎನ್ನಲಾಗಿದೆ.