ತೆಲಂಗಾಣ ಕಾಂಗ್ರೆಸ್ಸಿಂದಲೂ ಜಾತಿ ಗಣತಿ: ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ

ಹೈದರಾಬಾದ್‌: ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಸಿದ್ಧವಾಗಿದ್ದರೂ ಅದನ್ನು ಮಂಡನೆ ಮಾಡಿ, ಜಾರಿಗೆ ತರಲು ಮೀನಮೇಷ ಎಣಿಸುತ್ತಿರುವಾಗಲೇ, ಅತ್ತ ನೆರೆಯ ತೆಲಂಗಾಣ ಕಾಂಗ್ರೆಸ್ ಸರ್ಕಾರವೂ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದೆ. ಎಲ್ಲ ಸಮುದಾಯಗಳ ನಡುವೆ…

ಹೈದರಾಬಾದ್‌: ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಸಿದ್ಧವಾಗಿದ್ದರೂ ಅದನ್ನು ಮಂಡನೆ ಮಾಡಿ, ಜಾರಿಗೆ ತರಲು ಮೀನಮೇಷ ಎಣಿಸುತ್ತಿರುವಾಗಲೇ, ಅತ್ತ ನೆರೆಯ ತೆಲಂಗಾಣ ಕಾಂಗ್ರೆಸ್ ಸರ್ಕಾರವೂ ಜಾತಿಗಣತಿ ಮಾಡುವುದಾಗಿ ಘೋಷಣೆ ಮಾಡಿದೆ.

ಎಲ್ಲ ಸಮುದಾಯಗಳ ನಡುವೆ ಸಮ ಪ್ರಮಾಣದಲ್ಲಿ ಸಂಪನ್ಮೂಲಗಳ ಹಂಚಿಕೆ ಉದ್ದೇಶದಿಂದ ಸಮಗ್ರವಾದ ಮನೆಮನೆ ಜಾತಿ ಸಮೀಕ್ಷೆ ನಡೆಸುವುದಕ್ಕೆ ನಿಶಾನೆ ತೋರಿದೆ. ತನ್ಮೂಲಕ ಕರ್ನಾಟಕ, ಬಿಹಾರ, ಆಂಧ್ರಪ್ರದೇಶ ಬಳಿಕ ಜಾತಿ ಗಣತಿ ನಡೆಸುತ್ತಿರುವ ರಾಜ್ಯ ಎನಿಸಿಕೊಂಡಿದೆ.

ಗಣತಿ ಪ್ರಕ್ರಿಯೆ ಆರಂಭವಾದ ದಿನದಿಂದ 60 ದಿನದೊಳಗೆ ವರದಿ ಸಲ್ಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ ನೀಡಿದ್ದು, ಇದಕ್ಕಾಗಿ 80 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲು ನಿರ್ಧರಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಯೋಜನಾ ಇಲಾಖೆಯನ್ನು ನೋಡಲ್‌ ಏಜೆನ್ಸಿಯಾಗಿ ನೇಮಿಸಲಾಗಿದೆ.

Vijayaprabha Mobile App free

ಚುನಾವಣೆಯಲ್ಲಿ ಭರವಸೆ:

ಒಬಿಸಿ, ಎಸ್ಸಿ, ಎಸ್ಟಿ ಹಾಗೂ ಇತರೆ ದುರ್ಬಲ ವರ್ಗದ ಜನರಿಗೆ ಸಾಮಾಜಿಕ, ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಹಾಗೂ ರಾಜಕೀಯ ಸೇರಿದಂತೆ ವಿವಿಧ ಅವಕಾಶಗಳ ಜಾರಿ ಮತ್ತು ಯೋಜನೆ ಉದ್ದೇಶವನ್ನು ಗಣತಿ ಹೊಂದಿದೆ ಎಂದು ಆದೇಶ ಹೇಳುತ್ತದೆ. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳಲ್ಲಿ ಜಾತಿ ಗಣತಿ ಕೂಡ ಒಂದಾಗಿತ್ತು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.