Jammu & Kashmir: ಆರು ವರ್ಷಗಳ ರಾಷ್ಟ್ರಪತಿ ಆಳ್ವಿಕೆ ಅಂತ್ಯ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳಿಂದ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಈಗ ಹಿಂಪಡೆಯಲಾಗಿದೆ. 2014ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಾಗ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು…

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳಿಂದ ಹೇರಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಈಗ ಹಿಂಪಡೆಯಲಾಗಿದೆ.

2014ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಾಗ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು‌. ಆದರೆ 2018 ರಲ್ಲಿ ಪಿಡಿಪಿ ಜೊತೆಗಿನ ತನ್ನ ಬೆಂಬಲವನ್ನು ಬಿಜೆಪಿಯು ಹಿಂತೆಗೆದುಕೊಂಡ ನಂತರ ಸರ್ಕಾರ ಪತನಗೊಂಡಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ನಡೆಯುತ್ತಿತ್ತು.

ಇತ್ತೀಚಿಗಷ್ಟೇ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಜಯಭೇರಿ ಬಾರಿಸಿದೆ. ಅದು 49 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 29 ಸ್ಥಾನಗಳನ್ನು ಗೆದ್ದು ಇದೀಗ ಸರ್ಕಾರ ರಚನೆಗೆ ಸಿದ್ಧತೆಗಳು ನಡೆಯುತ್ತಿವೆ. ಹೀಗಾಗಿ ಆರು ವರ್ಷಗಳ ರಾಷ್ಟ್ರಪತಿ ಆಡಳಿತವನ್ನ ಇದೀಗ ಅಂತ್ಯಗೊಳಿಸಲಾಗಿದೆ‌.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.