ಚಿಕ್ಕಬಳ್ಳಾಪುರ: ನಿನಲ್ಲ, ನಿಮ್ಮಪ್ಪನ ಕೈಲೂ ನನ್ನ ಟಚ್ ಮಾಡಕ್ಕಾಗಲ್ಲ ಎಂದು ಸುಧಾಕರ್ ಮಾತಿಗೆ ಪ್ರತಿಕ್ರಿಯಿಸಿ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. ನಗರಸಭೆ ಚುನಾವೆಣೆ ಬಳಿಕ ಮಾತನಾಡಿದ ಅವರು, ಕೆ. ಸುಧಾಕರ್ ಒಬ್ಬ ಕೋವಿಡ್ ಕಳ್ಳ. ಸುಧಾಕರ್ʼನನ್ನು ಜೈಲಿಗೆ ಹಾಕುವವರೆಗೂ ಬಿಡಲ್ಲ. ತಾಕತ್ತು, ದಮ್ಮು ಇದ್ರೆ ಬಚಾವ್ ಆಗು ನೋಡೋಣ ಎಂದು ಕೆ. ಸುಧಾಕರ್ ಅವರ ಮಾತಿಗೆ ಸವಾಲ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ 7-8 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಸಂಸದರು ಖರ್ಚು ಮಾಡಿ ಕಾಂಗ್ರೆಸ್ ಸದಸ್ಯರನ್ನು ಖರೀದಿ ಮಾಡಿದ್ದಾರೆ. ನನ್ನ ಒಂದು ಕೂದಲನ್ನು ಕಿತ್ತುಕೊಳ್ಳಲು ಸಾಧ್ಯವಿಲ್ಲ. ಹೆಣಗಳ ಮೇಲೆ ದುಡ್ಡು ಮಾಡಿ ನಗರಸಭೆ ಚುನಾವಣೆಯಲ್ಲಿ ಹಾಕಿದ್ದಾರೆ. ನಮ್ಮ ಬಳಿ ಹಣ ಇಲ್ಲ. ನಿನ್ನ ಅಖಾಡದಲ್ಲಿ ಬಂದು ನಾನು ನಿನ್ನನ್ನು ಹೊಡಿದಿದ್ದೇನೆ. ನಾನು ಒಬ್ಬ ಗಂಡಸು. ಮುಂದಿನ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment