ಹೈದರಾಬಾದ್: ನಟ ಮೆಗಾ ಸ್ಟಾರ್ ಚಿರಂಜೀವಿ ಅವರು ಗಿನ್ನಿಸ್ ದಾಖಲೆ ಬರೆದಿದ್ದು, ಇಂದು ಅವರಿಗೆ ‘ಭಾರತೀಯ ಚಿತ್ರರಂಗದ ಮೋಸ್ಟ್ ಪ್ರೊಫೈಲಿಕ್ ಸ್ಟಾರ್’ ಎಂದು ಪ್ರಮಾಣಪತ್ರ ನೀಡಲಾಗಿದೆ.
ಚಿರಂಜೀವಿ ಅವರು ಈವರೆಗೂ 156 ಸಿನಿಮಾಗಳಲ್ಲಿ ನಟಿಸಿದ್ದು, ಕಳೆದ ೪೬ ವರ್ಷಗಳಿಂದ ಅವರು ಸಿನಿಮಾರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈವರೆಗೆ ಚಿರಂಜೀವಿ ಅವರು ತಾವು ಅಭಿನಯಿಸಿರುವ ಸಿನಿಮಾಗಳ 537 ಹಾಡುಗಳಲ್ಲಿ ಡ್ಯಾನ್ಸ್ ಮಾಡಿದ್ದಾರೆ. 24 ಸಾವಿರ ಡ್ಯಾನ್ಸ್ ಸ್ಟೆಪ್ಸ್ ಹಾಕಿದ್ದು, ಈ ಸಾಧನೆಗಾಗಿ ಅವರ ಹೆಸರು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆಗೊಂಡಿದೆ.
ಹೈದರಾಬಾದ್‌ನಲ್ಲಿ ಚಿರಂಜೀವಿ ಅವರಿಗೆ ಗಿನ್ನಿಸ್ ವಿಶ್ವ ದಾಖಲೆಯ ಪ್ರಮಾಣಪತ್ರ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಾಲಿವುಡ್ ನಟ ಆಮಿರ್ ಖಾನ್ ಆಗಮಿಸಿದ್ದರು. ಇನ್ನು ಗಿನ್ನಿಸ್ ದಾಖಲೆ ಬರೆದ ಚಿರಂಜೀವಿ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment