ಜಾತಿಗಣತಿ ಸಮುದಾಯಗಳ ವಿಶ್ವಾಸಕ್ಕೆ ಸಿಎಂ ಕಸರತ್ತು: ಭಾನುವಾರ ಲಿಂಗಾಯತ, ಒಕ್ಕಲಿಗ ಸಚಿವರ ಜತೆ ಸಿದ್ದು ಸಭೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಾತಿ ಗಣತಿ ವರದಿ ಕುರಿತು ಎಲ್ಲ ಸಮುದಾಯಗಳ ಸಚಿವರ ಅಹವಾಲು ಕೇಳಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಅ.20ರಂದು) ಪ್ರತ್ಯೇಕವಾಗಿ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ…

ಬೆಂಗಳೂರು: ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಜಾತಿ ಗಣತಿ ವರದಿ ಕುರಿತು ಎಲ್ಲ ಸಮುದಾಯಗಳ ಸಚಿವರ ಅಹವಾಲು ಕೇಳಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಅ.20ರಂದು) ಪ್ರತ್ಯೇಕವಾಗಿ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರ ಸಭೆ ನಡೆಸಲಿದ್ದಾರೆ.

ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕಸರತ್ತು ಆರಂಭಿಸಿರುವ ಸಿದ್ದರಾಮಯ್ಯ ಅವರು, ಭಾನುವಾರ ಎರಡೂ ಸಮುದಾಯದ ಸಂಪುಟ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಲಿಂಗಾಯತ ಸಮುದಾಯವು ಮನೆ-ಮನೆಗೂ ಭೇಟಿ ನೀಡಿ ಕಾಂತರಾಜ ಆಯೋಗವು ವರದಿ ಸಿದ್ಧಪಡಿಸಿಲ್ಲ. ಹೀಗಾಗಿ ವೈಜ್ಞಾನಿಕ ವರದಿ ಸಿದ್ಧಪಡಿಸುವಂತೆ ಒತ್ತಾಯಿಸಿದೆ. ಮತ್ತೊಂದೆಡೆ ಒಕ್ಕಲಿಗ ಸಂಘವು ಆಧಾರ್‌ ಆಧಾರಿತ ಜಾತಿಗಣತಿ ವರದಿ ಜಾರಿ ಆಗಬೇಕು ಎಂದು ಆಗ್ರಹಿಸಿದೆ.

Vijayaprabha Mobile App free

ಈ ಹಿನ್ನೆಲೆಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದ ಹನ್ನೆರಡು ಮಂದಿ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಆಂಜನೇಯ ಭೇಟಿ?:

ಈ ನಡುವೆ ಒಳ ಮೀಸಲಾತಿ ಕುರಿತು ಚರ್ಚಿಸಲು ಮಾಜಿ ಸಚಿವ ಎಚ್. ಆಂಜನೇಯ ನೇತೃತ್ವದ ನಿಯೋಗವು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.