‘ರಾಜ್ಯಾದ್ಯಂತ ಅನರ್ಹ ಬಿಪಿಎಲ್. ಕಾರ್ಡುಗಳನ್ನು ರದ್ದುಗೊಳಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಿ’ – ಸಿಎಂ

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27…

ಬೆಂಗಳೂರು: ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ DC ಮತ್ತು CEO ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು ಎಂದರು.

ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ.ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್‌ ನಲ್ಲಿ ಟಾಸ್ಕ್‌ ಪೋರ್ಸ್‌ ರಚನೆ. ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆ ಲಭ್ಯವಾಗಿಡುವಂತೆ ಸೂಚನೆ ನೀಡಲಾಯಿತು.

Vijayaprabha Mobile App free

ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್‌ ಪ್ರಕಾರ ನೀಡಲು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ. ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು.27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು.20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳು 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಉತ್ತಮವಾಗಿ ಮಳೆಯಾಗಿರುವ ಕಾರಣ ಎಲ್ಲಾ ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ.ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್‌ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ 92 ಉಪ ನೋಂದಣಿ ಹಾಗೂ 15 ಜಿಲ್ಲಾ ನೋಂದಣಿ ಕಚೇರಿಗಳು ಖಾಸಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರ ಪ್ರದೇಶದಲ್ಲಿ ಅತಿ ಹೆಚ್ಚು ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಬಿಬಿಎಂಪಿ ಅಧೀನದ ಕಟ್ಟಡಗಳಲ್ಲಿ ಸ್ಥಳಾವಕಾಶ ಒದಗಿಸಬೇಕು ಎಂದು ಸೂಚಿಸಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.