ಬೆಂಗಳೂರು: ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.
ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಳ್ಳಲಿಲ್ಲ. ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ.
ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment