ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನ್ನು ಹೈಕೋರ್ಟ್ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ಆದೇಶಿಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆ ನಡೆಸಬೇಕಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ರಾಜ್ಯಪಾಲರ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು. ಈ ಹಿನ್ನೆಲೆ ಹೈಕೋರ್ಟ್ ತನ್ನ ವಿಚಾರಣೆ ಅಂತ್ಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment