ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ FIR ಸಾಧ್ಯತೆ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ,…

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಇಂದು ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.