‘ಮೂಡ ಸೈಟ್ ಹಿಂದಿರುಗಿಸುವ ನಿರ್ಧಾರ ಕೈಗೊಂಡು ನನ್ನ ಪತ್ನಿ ಆಶ್ಚರ್ಯ ತಂದಿದ್ದಾರೆ’- ಸಿಎಂ

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದಾಗಿ ನನ್ನ ಪತ್ನಿ ನೊಂದಿದ್ದಾರೆ. ಹೀಗಾಗಿ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 14…

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದಾಗಿ ನನ್ನ ಪತ್ನಿ ನೊಂದಿದ್ದಾರೆ. ಹೀಗಾಗಿ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

14 ಸೈಟ್‌ಗಳನ್ನು ಪಾರ್ವತಿ ಅವರು ಮರಳಿ ಮುಡಾಕ್ಕೆ ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ ಎಂದು ಹೇಳಿದ್ದಾರೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ. ಅವರು ದ್ವೇಷ ರಾಜಕಾರಣ, ಸತ್ಯಮೇವ ಜಯತೆ ಎಂದು ಹ್ಯಾಶ್ ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.