‘ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ನೀಡಲಾಗುವುದು’-ಸಿಎಂ ಸಿದ್ದರಾಮಯ್ಯ

ಬೆಳಗಾವಿ:ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ…

ಬೆಳಗಾವಿ:ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು.

ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

Vijayaprabha Mobile App free

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.