ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಹೇಳಿಕೆ ನೀಡಿದ್ದಾರೆ.
ಆ.27ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ ವಿಚಾರವಾಗಿ ಮಾತನಾಡಿದ ಅವರು, ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆ ಮಾಡುತ್ತೇವೆಂದು ಹೇಳಿದ್ದಾರೆ.
ಹಿಂದೆ ಆ.25ಕ್ಕೆ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು. ಅಂದು ಐಪಿಬಿಎಸ್ ಪರೀಕ್ಷೆ ಇರುವ ಕಾರಣದಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿತ್ತು. ಈಗ ಆ.27ಕ್ಕೆ ಪರೀಕ್ಷೆ ನಿಗದಿಯಾಗಿದೆ.
ಸುಮಾರು 2,10,910 ಅಭ್ಯರ್ಥಿಗಳು, 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಆದರೆ ದಿನಾಂಕ ಮಾತ್ರ ತರಾತುರಿಯಲ್ಲಿ ಘೋಷಣೆ ಮಾಡಲಾಗಿದೆ ಎಂಬುವುದಾಗಿ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment