ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ ವಿರುದ್ಧದ ಮುಡಾ ಕೇಸ್ ಬಹಳಷ್ಟು ಸದ್ದು ಮಾಡಿತ್ತು. ಇದೀಗ ಮುಡಾ ಅಕ್ರಮ ಕೇಸ್‌ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ ದೊರೆತಿದೆ. ಅಬ್ರಾಹಂ ಎಂಬವರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಕುರಿತ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಮೈಸೂರು ಮೂಲದ ಸ್ನೇಹಮಯಿ ಕೃಷ್ಟ ಹಾಗೂ ಪ್ರದೀಪ್ ಎನ್ನುವವರು ಇದೇ ವಿಚಾರದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.