ಚನ್ನಪಟ್ಟಣ ಉಪಚುನಾವಣೆಗೆ ಜಿಲ್ಲಾಡಳಿತ ಸಜ್ಜು: ಕ್ಷೇತ್ರದಲ್ಲಿ 276 ಮತಗಟ್ಟೆಗಳ ನಿರ್ಮಾಣ

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಆಗಿದ್ದು, ಈ ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯ ಆಗಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ…

ರಾಮನಗರ: ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿ ಆಗಿದ್ದು, ಈ ನೀತಿ ಸಂಹಿತೆ ಇಡೀ ಜಿಲ್ಲೆಗೆ ಅನ್ವಯ ಆಗಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್.ವಿ.ಗುರುಕರ್ ಅವರು ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಉಪಚುನಾವಣೆ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 276 ಮತಗಟ್ಟೆಗಳ ನಿರ್ಮಾಣ ಮಾಡಲಾಗುವುದು. ಕ್ಷೇತ್ರದಲ್ಲಿ ಒಟ್ಟು 2,32,836 ಮತದಾರರಿದ್ದಾರೆ. ಈ ಪೈಕಿ ಪುರುಷರು-1,12,217, ಮಹಿಳೆಯರು-1,20,557, ಇತರೆ-8 ಇದ್ದಾರೆ. ಕ್ಷೇತ್ರದಲ್ಲಿ 8,336 ಯುವ ಮತದಾರರು, 85 ವಯಸ್ಸಿನ 1613 ಮತದಾರರು ಇದ್ದಾರೆ ಎಂದು ತಿಳಿಸಿದರು.

ಚುನಾವಣಾ ಖರ್ಚುವೆಚ್ಚ ₹40 ಲಕ್ಷ ನಿಗದಿ:

ಉಪ ಚುನಾವಣೆಯಲ್ಲಿ ಅಕ್ರಮ ತಡೆಯಲು 16 ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಲಾಗಿದ್ದು, ಚೆಕ್ ಪೋಸ್ಟ್ ಬಳಿ ಸಿಸಿಟಿವಿ ಕಣ್ಗಾವಲು ಇರಲಿದೆ. ಬಾಡೂಟ, ಅವಾರ್ಡ್ ಪ್ರೋಗ್ರಾಂ ಸೇರಿ ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗುತ್ತದೆ. ಚುನಾವಣಾ ಖರ್ಚುವೆಚ್ಚ ₹40 ಲಕ್ಷ ಮೀರದಂತೆ ಸೂಚನೆ ನೀಡಲಾಗಿದೆ. ರಾಮನಗರ ಎಸಿ ಬಿನೋಯ್ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಡಿಸಿ ಮಾಹಿತಿ ನೀಡಿದರು.

Vijayaprabha Mobile App free

ಪೊಲೀಸ್ ಬಂದೂಬಸ್ತ್:

ಉಪಚುನಾವಣೆಗೆ ಬಿಗಿ ಪೊಲೀಸ್ ಬಂದೂಬಸ್ತ್ ಕೈಗೊಳ್ಳಲಾಗಿದ್ದು, 650ಕ್ಕೂ ಹೆಚ್ಚು ಪೋಲಿಸರ ನಿಯೋಜನೆ ಮಾಡಲಾಗುವುದು. 10 ಪ್ಯಾರಾ ಮಿಲಿಟರಿ ಪೋರ್ಸ್ ಗೆ ಮನವಿ ಸಲ್ಲಿಸಲಾಗಿದೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ ನೀಡಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.