ಯತ್ನಾಳ್, ಸಿ.ಟಿ.ರವಿ, ಸೂಲಿಬೆಲೆ ವಿರುದ್ಧ ಮೈಸೂರಲ್ಲಿ ಕಾಂಗ್ರೆಸ್ ದೂರು ದಾಖಲು

ಮೈಸೂರು: ಬಿಜೆಪಿ ನಾಯಕರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮೈಸೂರಲ್ಲಿ ದೂರು ದಾಖಲಾಗಿದೆ. ಹೌದು, ಮುಸ್ಲಿಂ ಸಮುದಾಯವನ್ನು…

ಮೈಸೂರು: ಬಿಜೆಪಿ ನಾಯಕರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಮೈಸೂರಲ್ಲಿ ದೂರು ದಾಖಲಾಗಿದೆ.

ಹೌದು, ಮುಸ್ಲಿಂ ಸಮುದಾಯವನ್ನು ಗುರುಯಾಗಿಸಿ ಕೋಮು ದ್ವೇಷ ಹರಡಿಸುವ ಹೇಳಿಕೆಗಳನ್ನು ನೀಡುತ್ತಿರುವರ ಮೂವರು ಬಿಜೆಪಿ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದವರು ಶನಿವಾರ ದೂರು ನೀಡಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನಪರಿಷತ್ತು ಸದಸ್ಯ ಸಿ.ಟಿ. ರವಿ ಹಾಗೂ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾನೂನು ಕ್ರಮಕ್ಕೆ ಕೈಗೊಳ್ಳಬೇಕು ಎಂದು ಮೈಸೂರು ಜಿಲ್ಲೆಯ ಹೆಚ್ಚುವರಿ ಎಲ್ಪಿ ಎಲ್. ನಾಗೇಶ್ ಅವರಿಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಲ್ಲಾಧ್ಯಕ್ಷ ಮೋಸಿನ್ ಖಾನ್ ದೂರು ಸಲ್ಲಿಸಿದ್ದಾರೆ.

Vijayaprabha Mobile App free

ಇತ್ತೀಚಿಗೆ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ. ರವಿ, ಚಕ್ರವರ್ತಿ ಸೂಲಿಬೆಲೆ ಮುಸ್ಲಿಂ ಸಮುದಾಯವನ್ನ ಟಾರ್ಗೆಟ್ ಮಾಡಿದ್ದಾರೆ. ಕೋಮುದ್ವೇಷ ಹರಡಿಸುವ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕೋಮು ಸೌಹರ್ದತೆ ಹಾಳಾಗುತ್ತಿದೆ. ಸಮಾಜದ ಶಾಂತಿ ಕದಡುವ ಹೇಳಿಕೆ ನೀಡುತ್ತಿರುವ ಈ ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ನಾಸೀರ್ ಖಾನ್, ಅಲ್ತಾಫ್ ಪಾಷಾ, ಚಾಮುಂಡೇಶ್ವರಿ ಬ್ಲಾಕ್ ಅಧ್ಯಕ್ಷ ಆರೀಫ್ ಪಾಷಾ, ಎಚ್.ಡಿ. ಕೋಟೆ ಬ್ಲಾಕ್ ಅಧ್ಯಕ್ಷ ಶಫಿ ಕೋಟೆ ಮೊದಲಾದವರು ಇದ್ದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.