ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಖಜಾನೆ ದಿವಾಳಿ: ದೇವೇಗೌಡ ವಾಗ್ದಾಳಿ 

ರಾಮನಗರ: ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣವಿಲ್ಲ. ಆದರೆ, ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು…

ರಾಮನಗರ: ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆಯನ್ನು ದಿವಾಳಿ ಮಾಡಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮೀ ಹಣವಿಲ್ಲ. ಆದರೆ, ಉಪಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸುಳ್ಳೇರಿಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು.

ಈ ಸರ್ಕಾರ ದಿವಾಳಿಯಾಗಿದ್ದು, ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿಯನ್ನು ಈಗಾಗಲೇ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijayaprabha Mobile App free

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ಧ್ವನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ. ಇಗ್ಗಲೂರು ಅಣೆಕಟ್ಟೆಯನ್ನು ಕಟ್ಟಿಸಿದ್ದು ಈ ದೇವೇಗೌಡ. 17 ಕೆರೆಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಯೋಗೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.