ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕೂಲಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವನ್ನು ರಿಯಲ್ ಸ್ಟಾರ್ ಉಪೇಂದ್ರ ನಿಭಾಯಿಸುತ್ತಿದ್ದಾರೆ.
ಇವರು ನಟಿಸುತ್ತಿರುವ ಇದೇ ಸಿನಿಮಾದಲ್ಲಿ ಬಾಲಿವುಡ್ ನಟ ಆಮಿರ್ ಖಾನ್ ಕೂಡ ಬಣ್ಣ ಹಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಈಚೆಗಷ್ಟೇ ‘ಕೂಲಿ’
ಸಿನಿಮಾದ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ಆಮಿರ್ ಖಾನ್ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಒಂದೇ ಸಿನಿಮಾದಲ್ಲಿ ರಜನಿಕಾಂತ್, ಉಪೇಂದ್ರ, ಆಮಿರ್ ಖಾನ್ ಅವರಂತಹ ಸ್ಟಾರ್ ಹೀರೋಗಳನ್ನು ನೋಡುವುದು ಫ್ಯಾನ್ಸ್‌ಗೆ ಹಬ್ಬವೇ ಸರಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment