Crop damage : ಬೆಂಗಳೂರು, ಕೊಪ್ಪಳ, ದಾವಣಗೆರೆ, ಹಾವೇರಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸಿದ್ದು, ಸುಮಾರು 35 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ.
Crop damage : ಎಲ್ಲಿಲ್ಲಿ ಎಷ್ಟು ಬೆಳೆ ಹಾನಿಯಾಗಿದೆ..?
ಚಿಕ್ಕಮಗಳೂರು: 25,000 ಹೆಕ್ಟೇರ್ ಅಡಿಕೆ ಬೆಳೆಗೆ ಕೊಳೆ ರೋಗ, 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ.
ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ 850 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಬೆಳೆ ನಾಶವಾಗಿದೆ.
ಇದನ್ನೂ ಓದಿ : ಇಂದಿನ ಹವಾಮಾನ ವರದಿ: ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ
ಕೊಪ್ಪಳ ಜಿಲ್ಲೆ: 350 ಹೆಕ್ಟೇರ್‌ನಲ್ಲಿ ಬೆಳೆದಿದ್ದ ಭತ್ತದ ಬೆಳೆ ಹಾನಿಯಾಗಿದ್ದರೆ, 900 ಹೆಕ್ಟೇರ್‌ಗೂ ಅಧಿಕ ವ್ಯಾಪ್ತಿಯ ಮೆಕ್ಕೆಜೋಳ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಹಾವೇರಿ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ, ಕಡ್ಲೆ ಬೆಳೆ ಹಾನಿಯಾಗಿದೆ.
ಹೀಗೆ ಹಲವೆಡೆ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.