ವೈದ್ಯಕೀಯ ಕಾಲೇಜಿನ ಸಿಲಿಂಡರ್‌ ಸ್ಫೋಟ: ಅಗ್ನಿ ಅವಘಡಕ್ಕೆ 10 ಮಕ್ಕಳು ಬಲಿ, 16 ಶಿಶುಗಳಿಗೆ ಗಾಯ

ಲಖನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು…

fire accident

ಲಖನೌ: ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾರ್ಡ್‌ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 10 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ಇದೆ.

ಶುಕ್ರವಾರ ರಾತ್ರಿ 10.30ಕ್ಕೆ ನವಜಾತ ಶಿಶುಗಳ ವಾರ್ಡ್‌ನಲ್ಲಿ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಅವಘಡದ ಕುರಿತು ಎಚ್ಚರಿಕೆ ನೀಡಬೇಕಿದ್ದ ಅಲರಾಂ ಹೊಡೆಯದೇ ಇದ್ದ ಕಾರಣ ತಕ್ಷಣವೇ ರಕ್ಷಣಾ ಕಾರ್ಯ ಸಾಧ್ಯವಾಗಿಲ್ಲ.

ಬಳಿಕ ಆಸ್ಪತ್ರೆ ಸಿಬ್ಬಂದಿ ಕೆಲ ಮಕ್ಕಳನ್ನು ಬೇರೆಡೆಗೆ ಸಾಗಿಸುವಲ್ಲಿ ಯಶಸ್ವಿಯಾದರೂ 10 ಮಕ್ಕಳು ಆ ಅದೃಷ್ಟವಿಲ್ಲದೇ ಅಲ್ಲೇ ಸಾವನ್ನಪ್ಪಿವೆ. ಈ ಮಕ್ಕಳೆಲ್ಲಾ ಬೆಂಕಿ/ ಉಸಿರುಕಟ್ಟಿ ಸಾವನ್ನಪ್ಪಿವೆ ಎಂದು ವೈದ್ಯರು ತಿಳಿಸಿದ್ದಾರೆ. ತಡರಾತ್ರಿವರೆಗೆ 35ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಲಾಗಿದೆ. 16 ನವಜಾತ ಶಿಶುಗಳು ಅಗ್ನಿ ಅವಘಡದಲ್ಲಿ ಗಾಯಗೊಂಡಿವೆ.

Vijayaprabha Mobile App free

ಬೆಂಕಿ ಸುದ್ದಿ ತಿಳಿಯುತ್ತಲೇ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ. ಮಡಿದ ಮಕ್ಕಳ ಕುಟುಂಬ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿರುವ ಅವರು ನೊಂದ ಕುಟುಂಬಳಿಗೆ ಎಲ್ಲಾ ರೀತಿಯ ನೆರವಿಗೆ ಸೂಚಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.