ನಟ ದರ್ಶನ್‌ ಮೈಸೂರು ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ..!

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ.…

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂಟಿತನ ತಡೆಯಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.