ರೇಣುಕಾಸ್ವಾಮಿ ಕೊಲೆ ಪ್ರಕರಣ: ಕ್ಷಮಾಪಣಾ ವಿಡಿಯೋ ಮಾಡಲು ಯತ್ನ!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರ ತನಿಖೆಯ ವೇಳೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ದರ್ಶನ್ ಗ್ಯಾಂಗ್ ಮನಸೋ ಇಚ್ಛೆ ಹಲ್ಲೆ ನಡೆಸಿದ ಬಳಿಕ…

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರ ತನಿಖೆಯ ವೇಳೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ದರ್ಶನ್ ಗ್ಯಾಂಗ್ ಮನಸೋ ಇಚ್ಛೆ ಹಲ್ಲೆ ನಡೆಸಿದ ಬಳಿಕ ಕ್ಷಮಾಪಣಾ (ಅಫಾಲಜಿ) ವಿಡಿಯೋ ಮಾಡಲು ಯತ್ನಿಸಿದ್ದ ವಿಚಾರ ಬೆಳಕಿಗೆ ಬಂದಿದೆ.

ಹೌದು ಕೊಲೆ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇದೀಗ ಮತ್ತೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮತ್ತೊಂದು ಅಚ್ಚರಿ ಬೆಳಕಿಗೆ ಬಂದಿದೆ. ರೇಣುಕಾಸ್ವಾಮಿಗೆ ಹಿಗ್ಗಾಮಗ್ಗಾ ಥಳಿಸಿ ಬಳಿಕ ಘಟನೆ ಬಗ್ಗೆ ಅವನಿಂದಲೇ ಕ್ಷಮಾಪಣೆ ಕೇಳಿಸಲು ದರ್ಶನ್ ಅಂಡ್ ಗ್ಯಾಂಗ್ ಪ್ರಯತ್ನಿಸಿದ್ದರು ಎಂಬ ಸ್ಪೋಟಕ ಮಾಹಿತಿ ಬಹಿರಂವಾಗಿದೆ.

ಇನ್ಮುಂದೆ ಈ ರೀತಿ ಮಾಡೊಲ್ಲ, ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜಾಗಲಿ, ಫೋಟೊಗಳಾಗಲಿ ಕಳಿಸುವುದಿಲ್ಲ ನನ್ನ ಕ್ಷಮಿಸಿ ಎಂದು ಕ್ಷಮಾಪಣೆ ಕೇಳುವಂತೆ ಗ್ಯಾಂಗ್ ಒತ್ತಾಯ ಮಾಡಿತ್ತು. ಆದರೆ ಅಷ್ಟೊತ್ತಿಗಾಗಲೇ ನಿಲ್ಲಲು, ಕೂರಲು ಆದಷ್ಟು ಮನಬಂದಂತೆ ಬಡಿದಿದ್ದರಿಂದ ರೇಣುಕಾಸ್ವಾಮಿ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಬಳಿಕ ನಾಳೆ ಹೇಳಿಸೋಣ ಬಿಡ್ರೋ ಅಂತಾ ದರ್ಶನ್ ಸುಮ್ಮನಾಗಿದ್ದರಂತೆ.

Vijayaprabha Mobile App free

ತೀವ್ರ ಅಸ್ವಸ್ಥನಾಗಿ ಬಿದ್ದಿದ್ದ ರೇಣುಕಾಸ್ವಾಮಿಯನ್ನ ಸೆಕ್ಯೂರಿಟಿ ರೂಂಗೆ ತಂದು ಹಾಕಿದ್ದ ಗ್ಯಾಂಗ್. ನಂತರ ಕೆಲವೇ ಕ್ಷಣಗಳಲ್ಲಿ ರೇಣುಕಾಸ್ವಾಮಿ ಪ್ರಾಣಪಕ್ಷಿ ಹಾರಿಹೋಗಿತ್ತು. ಇದರಿಂದ ಗಾಬರಿಗೊಂಡ ಗ್ಯಾಂಗ್. ಅಷ್ಟೊತ್ತಿಗಾಗಲಿ ದರ್ಶನ್ ಹೊರಹೋಗಿದ್ದರಿಂದ ಫೋನ್‌ ಮಾಡಿ ವಿಚಾರ ತಿಳಿಸಿದ್ದ ಆರೋಪಿಗಳು. ಪೊಲೀಸರ ತನಿಖೆ ವೇಳೆ ಅಫಾಲಜಿ ಪ್ಲಾನ್ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿಗಳ ಮೊಬೈಲ್‌ ಪರಿಶೀಲನೆಗೆ ರಿಟ್ರೀವ್ ಗೆ ಕಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.