ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಕೋರ್ಟ್ ಶಾಕ್ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದೆ.
ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿತ್ತು.
ಇಂದು ದರ್ಶನ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ದರ್ಶನ್ ಕೊಲೆ ಆರೋಪಿ ಆಗಿರುವುದರಿಂದ ಅವರಿಗೆ ಈ ಸೌಲಭ್ಯವನ್ನು ನೀಡಲು ಆಗುವುದಿಲ್ಲವೆಂದು ಕೋರ್ಟ್‌ಹೇಳಿದೆ. ಜೈಲು ನಿಯಾಮವಳಿ 728ರ ಪ್ರಕಾರ ಕೊಲೆ ಆರೋಪಿಗಳಿಗೆ ಈ ಸೌಲಭ್ಯಗಳನ್ನು ನೀಡಲು ಸಾಧ್ಯವಿಲ್ಲವೆಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment