ನಟ ದರ್ಶನ್‌ಗೆ ಜೈಲೂಟವೇ ಗತಿ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು…

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.