ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಟ್ಟೆ ಮೇಲೆ ರಕ್ತದ ಕಲೆ ಪತ್ತೆ- ಎಫ್‌ಎಸ್‌ಎಲ್ ವರದಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ವಿರುದ್ಧ ಇದೀಗ ಬಲವಾದ ಸಾಕ್ಷಿಯೊಂದು ದೊರೆತಿದೆ. ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು…

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ವಿರುದ್ಧ ಇದೀಗ ಬಲವಾದ ಸಾಕ್ಷಿಯೊಂದು ದೊರೆತಿದೆ. ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಪತ್ತೆಯಾಗಿದ್ದು, ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಿದೆ.

ವಿಧಿ ವಿಜ್ಞಾನ ಪ್ರಯೋಗಾಲಯ ವರದಿಯಲ್ಲಿ ದರ್ಶನ್ ಬಟ್ಟೆ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಧೃಡಪಟ್ಟಿದೆ. ಈ ಮೂಲಕ ಪೊಲೀಸರು ದರ್ಶನ್ ವಿರುದ್ಧ ಇನ್ನೊಂದು ಮಹತ್ವದ ಸಾಕ್ಷಿಯನ್ನು ಸಂಗ್ರಹಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಮನೆಯಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಕರಣದ ಎ2 ಆಗಿರುವ ದರ್ಶನ್ ಮನೆಯಲ್ಲಿ ಅವರ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ರೌಂಡ್ ನೆಕ್ ಶರ್ಟ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

Vijayaprabha Mobile App free

ಎಫ್‌ಎಸ್‌ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ವರದಿಯಲ್ಲಿ ಧೃಡಪಟ್ಟಿದೆ. ಇದು ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಬಲವಾದ ಸಾಕ್ಷಿಯಾಗಿರಲಿದೆ. ಇನ್ನು ಇದರೊಂದಿಗೆ ಎಫ್‌ಎಸ್‌ಎಲ್ ತಂಡದವರು ವಶಕ್ಕೆ ಪಡೆದಿರುವ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಉಳಿದಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.