ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.
ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.
ನ್ಯಾಯಾಂಗ ಬಂಧನ ವಿಸ್ತರಣೆಗೊಂಡ ಬೆನ್ನಲ್ಲೇ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಶಿರಾ ತುಮಕೂರು ಮಾರ್ಗವಾಗಿ ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಕರೆತರಲಾಗುತ್ತದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment